×
Ad

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಸೊರೇನ್‌ಗೆ ನ್ಯಾಯಾಂಗ ಬಂಧನ

Update: 2024-02-15 21:09 IST

ಹೇಮಂತ್ ಸೊರೇನ್ (PTI)

ರಾಂಚಿ : ಇಲ್ಲಿಯ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಭೂ ಹಗರಣ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಫೆ.22ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

‘ಜಾರಿ ನಿರ್ದೇಶನಾಲಯ(ಈಡಿ)ದ ವಶದಲ್ಲಿದ್ದ ಆಡಳಿತಾರೂಢ ಜೆಎಂಎಂ ಕಾರ್ಯಾಧ್ಯಕ್ಷ ಸೊರೇನ್ರನ್ನು ಗುರುವಾರ ವಿಶೇಷ ಪಿಎಂಎಲ್ಎ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು.

‘ಸೊರೇನ್ ಅವರಿಗೆ ಫೆ.22ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ನಾವು ಅವರ ಜಾಮೀನು ಅರ್ಜಿಯನ್ನು ಸಲ್ಲಿಸಲಿದ್ದೇವೆ ’ ಎಂದು ಸೊರೇನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ರಾಜೀವ ರಂಜನ್ ತಿಳಿಸಿದರು.

ನ್ಯಾಯಾಲಯದಿಂದ ಸೊರೇನ್ ಅವರನ್ನು ರಾಂಚಿಯ ಹೋತ್ವಾರ್ನಲ್ಲಿರುವ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿಗೆ ಕರೆದೊಯ್ಯಲಾಯಿತು.

ಈಡಿ ಸೋರೇನ್ರನ್ನು ಜ.31ರಂದು ಬಂಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News