×
Ad

ದಸರಾ ಉದ್ಘಾಟನೆಗೆೆ ಬಾನು ಮುಷ್ತಾಕ್‌ಗೆ ಆಹ್ವಾನ : ಪರ-ವಿರೋಧ ಹೋರಾಟಕ್ಕೆ ಪೊಲೀಸರಿಂದ ಅನುಮತಿ ನಿರಾಕರಣೆ

Update: 2025-09-08 23:57 IST

ಮೈಸೂರು, ಸೆ.8 : ದಸರಾ ಮಹೋತ್ಸವ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ವಿಚಾರವಾಗಿ ಎರಡು ಸಂಘಟನೆಗಳು ಹಮ್ಮಿಕೊಂಡಿದ್ದ ಚಾಮುಂಡಿ ಬೆಟ್ಟ ಚಲೋಗೆ ಮೈಸೂರು ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದರೆ, ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ದಲಿತ ಮಹಾ ಸಭಾ ಕೂಡ ಚಾಮುಂಡಿ ಬೆಟ್ಟ ಚಲೋ ಹಮ್ಮಿ ಕೊಂಡಿದೆ. ಮಂಗಳವಾರ ಬೆಳಗ್ಗೆ ಎರಡು ಸಂಘಟನೆಗಳು ಹಮ್ಮಿಕೊಂಡಿರುವ ಚಲೋ ಮೆರವಣಿಗೆಗೆ ಮೈಸೂರು ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ.

ದಸರಾ ಮಹೋತ್ಸವ ವೇಳೆಯಲ್ಲಿ ಈ ಎರಡು ಪರ-ವಿರೋಧ ಮೆರವಣಿಗೆಯಿಂದ ಕಾನೂನು- ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬುದನ್ನು ಮನಗಂಡು ಅನುಮತಿ ನಿರಾಕರಣೆ ಮಾಡಲಾಗಿದೆ.

ಹಿಂದೂ ಜಾಗರಣ ವೇದಿಕೆಯು ಸೆ. 9ರಂದು ಬೆಳಗ್ಗೆ 7:30ಕ್ಕೆ ಕುರುಬಾರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿತ್ತು. ಅದೇ ಸ್ಥಳದಲ್ಲಿ ಬೆ. 7:30 ಗಂಟೆಗೆ ದಲಿತ ಮಹಾ ಸಭಾ ಚಾಮುಂಡಿ ಬೆಟ್ಟ ಕಡೆಗೆ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಸಲು ನಿರ್ಧರಿಸಿತ್ತು.

ಎರಡು ಸಂಘಟನೆಗಳು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟ ಚಲೋ ನಡೆಸಲು ಅನುಮತಿ ಕೇಳಿದ್ದು, ಅನುಮತಿ ನಿರಾಕರಿಸಲಾಗಿದೆ.

- ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News