×
Ad

ಪರಧರ್ಮ ಸಹಿಷ್ಣುತೆ, ಸಹಬಾಳ್ವೆ ಮೈಗೂಡಿಸಿಕೊಂಡರೆ ಮಾತ್ರ ಶಾಂತಿ ನೆಲೆಸಲು ಸಾಧ್ಯ : ಸಿಎಂ ಸಿದ್ದರಾಮಯ್ಯ

ಅಂತರ್‌ರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಉದ್ಘಾಟನೆ

Update: 2025-10-15 23:45 IST

ಮೈಸೂರು : ಪರಧರ್ಮ ಸಹಿಷ್ಣುತೆ, ಸಹಬಾಳ್ವೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಮಾತ್ರ ದೇಶದಲ್ಲಿ ಶಾಂತಿ, ಅಹಿಂಸೆ ಸತ್ಯ ನೆಲೆಗೊಳ್ಳಲು ಸಾಧ್ಯ. ಇದನ್ನೇ ಬುದ್ಧ, ಬಸವ, ಅಂಬೇಡ್ಕರ್ ಅವರು ಹೇಳಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು ವಿಶ್ವಮೇತ್ರಿ ಬುದ್ಧ ವಿಹಾರ ಇವರ ಸಂಯುಕ್ತಶ್ರಯದಲ್ಲಿ ಆಯೋಜಿಸಲಾಗಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ-2025 ಅಂತರ್‌ರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಿಗೂ ಸಮಾನ ಅವಕಾಶಗಳು ಇಲ್ಲದ ಕಾರಣ ಅಸಮಾನತೆ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಹೊಂದಿದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದಾರೆ. ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೊಳ್ಳೆಗಾಲದ ಜೇತವನ ಬುದ್ದವಿಹಾರದ ಭಂತೆ ಮನೋರಕ್ಖಿತ, ಗಾಂಧಿ ನಗರದ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಶಾಸಕರಾದ ಡಿ.ರವಿಶಂಕರ್, ಪುಟ್ಟರಂಗ ಶೆಟ್ಟಿ, ಎ.ಆರ್.ಕೃಷ್ಣ ಮೂರ್ತಿ, ನರೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕಳಲೆ ಕೇಶವ ಮೂರ್ತಿ, ವೇಣು ಗೋಪಾಲ್, ಡಿ.ಎಸ್.ವೀರಯ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಮಾಜಿ ಮೇಯರ್ ಪುರುಷೋತ್ತಮ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾಅಮರ್‌ನಾಥ್ , ಮಲ್ಕುಂಡಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News