×
Ad

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು ಅನಿವಾರ್ಯ : ಯತೀಂದ್ರ

Update: 2025-10-28 20:34 IST

ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು ಅನಿವಾರ್ಯ. ಬಹುತೇಕ ಕಾಂಗ್ರೆಸ್ ಪಕ್ಷದ ಶಾಸಕರ ಅಭಿಪ್ರಾಯ ಇದೇ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಹೈಕಮಾಂಡ್ ಹೇಳಿದರೆ ನಾನೇ ಪೂರ್ಣಾವಧಿ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಕುರಿತು ಚರ್ಚೆ ಆಗಿಲ್ಲ. ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆಸಿಲ್ಲ. ಬದಲಾವಣೆ ವಿಚಾರ ನನಗಾಗಲಿ, ತಂದೆಯವರಿಗಾಗಲಿ‌ ಗೊತ್ತೇ ಇಲ್ಲ. ಯಾರೇ ಸಿಎಂ ಆಗಬೇಕಾದರೂ ಹೈಕಮಾಂಡ್ ಒಪ್ಪಿಗೆ ಬೇಕು. ಸಿದ್ದರಾಮಯ್ಯ ಮುಂದುವರಿಯಬೇಕಾದರೂ ಕೂಡ ಒಪ್ಪಿಗೆ ಅನಿವಾರ್ಯ. ಇದೇ ಮಾತನ್ನು ತಂದೆಯವರು ಹೇಳಿರುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಮುನಿಯಪ್ಪ ಸಿಎಂ ಆಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಅವರೆಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇದೆ. ಅದನ್ನು ನಾವು ತಪ್ಪು ಅಂತ ಹೇಳಲು ಸಾಧ್ಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News