×
Ad

ಕಲೆಯು ಸಮಾಜದಲ್ಲಿ ಸಾಮರಸ್ಯವನ್ನು ಉತ್ತೇಜಿಸುತ್ತದೆ : ಥಾವರ್ ಚಂದ್ ಗೆಹ್ಲೋಟ್‌

ಸಂಗೀತ ವಿವಿ 10ನೇ ಘಟಿಕೋತ್ಸವ

Update: 2025-11-09 00:39 IST

ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಮತ್ತು ಮಾನವೀಯತೆಯನ್ನು ಏಕತೆಯಲ್ಲಿ ಬಂಧಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಹೇಳಿದ್ದಾರೆ.

ನಗರದ ಸಂಗೀತ ವಿಶ್ವವಿದ್ಯಾನಿಲಯದ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ, ಪಿ.ಎಚ್.ಡಿ ಪದವಿ ನೀಡಿ ಮಾತನಾಡಿದ ಅವರು, ಕಲೆಯ ಉದ್ದೇಶ ಕೇವಲ ಅದನ್ನು ಪ್ರದರ್ಶಿಸುವುದಲ್ಲ, ಬದಲಾಗಿ ಸಮಾಜದಲ್ಲಿ ಸಂವೇದನೆ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದಾಗಿದೆ ಎಂದರು.

ಗಾಯಕ ಜನಾರ್ದನ, ಪ್ರೊಫೆಸರ್ ಬಿ.ಆರ್. ಶೇಷಾದ್ರಿ ಅಯ್ಯಂಗಾರ್ ಮತ್ತು ಜಿ.ಎಂ.ಶಿವಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಕೇರಳದ ಕಲಾಮಂಡಲ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಅನಂತಕೃಷ್ಣನ್, ಕುಲಪತಿ ಪ್ರೊ.ನಾಗೇಶ್ ವಿ ಬೆಟ್ಟಕೋಟೆ ಮುಂತಾದ ಗಣ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News