ಈ ಬಾರಿ ದಸರಾದಲ್ಲಿ ಕಂಬಳ: ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ
ಮೈಸೂರು,ಆ.26: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ. ಈಗಾಗಲೇ ಜಾಗ ಗುರುತು ಮಾಡಿರುವ ಜಾಗದಲ್ಲಿ ಕಂಬಳ ನಡೆಯುತ್ತದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ವೀರನಹೊಸಹಳ್ಳಿಯಲ್ಲಿ ಬುಧವರಾ ದಸರಾ ಮಹೋತ್ಸವ-2026 ರ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಬಾರಿ ದಸರಾದಲ್ಲಿ ಕಂಬಳ ಇರುತ್ತದೆ. ಸಿಎಂ ಕೂಡ ಕಂಬಳ ನಡೆಸಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು.
ಈ ಬಾರಿ ದಸರಾದಲ್ಲಿ ಅಂಬಾರಿ ಹೊರುವ ಆನೆಯನ್ನು ಇನ್ನೂ ಆಯ್ಕೆ ಮಾಡಿಲ್ಲ, ತಾಲೀಮು ನಡೆಸಿದ ಬಳಿಕ ಅದನ್ನು ತೀರ್ಮಾನ ಮಾಡ್ತೇವೆ ಎಂದು ತಿಳಿಸಿದರು.
ಇಂದು ಗಜಪಯಣ ಆರಂಭವಾಗಿದೆ. ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸಲಾಗಿದೆ. 25 ವರ್ಷಗಳಿಂದ ದಸರಾದಲ್ಲಿ ಅಭಿಮನ್ಯು ಭಾಗಿಯಾಗಿತ್ತು. ಈ ಬಾರಿ ಅಭಿಮನ್ಯು ನಿವೃತ್ತಿಯಾಗಿದೆ. 6 ಬಾರಿ ಅಂಬಾರಿ ಹೊತ್ತಿತ್ತು
ಹೀಗಾಗಿ ಅಭಿಮನ್ಯುವಿಗೆ ಪೂಜೆ ಸಲ್ಲಿಸಿ ಬೀಳ್ಕೊಡುಗೆ ಕೊಡಲಾಗಿದೆ. ನಿಶಾನೆ ಆನೆಯಾಗಿ ಅಭಿಮನ್ಯುವನ್ನು ಕರೆತರುವ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಸಾಧ್ಯತೆಗಳನ್ನು ನೋಡಿಕೊಂಡು ಆ ಬಗ್ಗೆ ತೀರ್ಮಾನ ಮಾಡ್ತೇವೆ ಎಂದು ಹೇಳಿದರು.