ʼದಸರಾʼ ಉದ್ಘಾಟನೆ : ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
Update: 2025-09-03 18:24 IST
ಮೈಸೂರು : ನಾಡಹಬ್ಬ ʼಮೈಸೂರು ದಸರಾʼ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ʼಬೂಕರ್ ಪ್ರಶಸ್ತಿʼ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧವಾರ ಆಮಂತ್ರಣ ನೀಡಲಾಯಿತು.
ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.
ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.