×
Ad

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

Update: 2024-04-01 18:03 IST

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

ಯದುವೀರ್ ತಮ್ಮ ಬಳಿ ಒಂದು ಲಕ್ಷ ರೂ. ನಗದು, ಎರಡು ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ರೂ. ಹಣ, ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಷೇರುಗಳು, ನಾಲ್ಕು ಕೆಜಿ ಚಿನ್ನ, 20 ಕೆಜಿ ಬೆಳ್ಳಿ ಇದೆ ಎಂದು ಘೋಷಣೆ ಮಾಡಿದ್ದಾರೆ.

ಯದುವೀರ್ ಅವರ ಬಳಿ ಒಟ್ಟು 4,99,59,303 ಮೌಲ್ಯದ ಚರಾಸ್ತಿ ಹೊಂದಿದ್ದು, ಯಾವುದೇ ಸ್ಥಿರಾಸ್ತಿ ಇಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಕೃಷಿ ಭೂಮಿ ಹಾಗೂ ಸ್ವಂತ ಮನೆ ಇಲ್ಲ. ಯಾವ ವಾಣಿಜ್ಯ ಕಟ್ಟಡಗಳು  ಇಲ್ಲ ಎಂದು ಅಫಿಡವಿಟ್ ನಲ್ಲಿ ಮಾಹಿತಿ ನೀಡಿದ್ದಾರೆ.

ಯಾವುದೇ ಬ್ಯಾಂಕ್ ಗಳಿಂದ ಸಾಲ ಪಡೆದಿಲ್ಲ. ಯಾವುದೇ ರೀತಿಯ ಆಧಾಯ ತೆರಿಗೆ ಹಣ ಬಾಕಿ ಉಲಿಸಿಕೊಂಡಿಲ್ಲ. ಅಲ್ಲದೆ, ತನ್ನ  ಮೇಲೆ ಯಾವ ಪ್ರಕರಣಗಳೂ ದಾಖಲಾಗಿಲ್ಲ ಎಂದು ಇದೇ ವೇಳೆ ಘೋಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News