ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ : ಬಿ.ವೈ.ವಿಜಯೇಂದ್ರ
ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸ ನನಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಮಗೆ ಏನನ್ನಿಸುತ್ತದೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ ಅವರು, ನನ್ನ ಮುಖದಲ್ಲಿನ ಸಂತೋಷ, ನಗು ನೋಡಿದರೆ ಬದಲಾವಣೆಯಾಗುತ್ತದೆ ಎಂದು ಎನ್ನಿಸುತ್ತದೆಯೇ? ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೆ ಅದಕ್ಕೆ ಬದ್ಧ ಎಂದು ಹೇಳಿದರು.
ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಂದೂವರೆ ವರ್ಷ ಆಯಿತು. ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಯಕರ್ತರೊಡಗೂಡಿ ಹೋರಾಟ ಮಾಡಿದ್ದೇನೆ. ಕೆಲವು ವಿಚಾರಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಮಾಡಿದ್ದೇನೆ. ನನ್ನ ಕಾರ್ಯವೈಖರಿಗೆ ಬಗ್ಗೆ ಕಾರ್ಯಕರ್ತರಿಗೆ ತೃಪ್ತಿ ಇದೆ. ರಾಷ್ಟ್ರೀಯ ನಾಯಕರಿಗೂ ತೃಪ್ತಿ ಇದೆ. ಹಾಗಾಗಿ ನಾನೇ ಮುಂದುವರೆಯುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
ʼಮೈಸೂರು ಜಿಲ್ಲೆಯವರೇ ಆದ ಸಿಎಂ ಸಿದ್ಧರಾಮಯ್ಯ ಅವರು ಮೈಸೂರು ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಮೈಸೂರು-ಚಾಮರಾಜನಗರಕ್ಕೆ ಎಷ್ಟು ಹಣ ನೀಡಿದ್ದೀರಿ ಎಂದು ಬಹಿರಂಗ ಪಡಿಸಿʼ
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ.