×
Ad

ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ : ಸಿಎಂ ಸಿದ್ದರಾಮಯ್ಯ

Update: 2026-01-18 15:51 IST

ಮೈಸೂರು : ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ. ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬರಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು.

ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನ: ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ಕೊಡುಗೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News