ಸಾಂದರ್ಭಿಕ ಚಿತ್ರ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಲಿರುವ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸಾವಿರಾರು ಜನರು ಕಾತರದಿಂದ ಕಾಯುತ್ತಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಧ್ಯಾಹ್ನ 1.36ರಿಂದ 1.56ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂಜೆ 4.10ರಿಂದ 4.35ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆಯೊಂದಿಗೆ ಈ ಬಾರಿ ಪ್ರಶಾಂತ್ ನೇತೃತ್ವದ ಗಜಪಡೆಗಳು ಬನ್ನಿಮಂಟಪದವರೆಗೆ ಸಾಗಲಿವೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸುಮಾರು ಐದು ಕಿಲೋಮೀಟರ್‌ಗೂ ಹೆಚ್ಚು ದೂರ ಸಾಗುವ ಜಂಬೂ ಸವಾರಿಯನ್ನು ವೀಕ್ಷಿಸಲು ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.

ಕಳೆಗಟ್ಟಿದ ಸಾಂಸ್ಕೃತಿಕ ಕಲಾತಂಡಗಳು :

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಲಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಕಲಾತಂಡಗಳು ಬನ್ನಿಮಂಟಪದತ್ತ ಹೆಜ್ಜೆ ಹಾಕಲಿವೆ.

ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾಪ್ರದರ್ಶನಗಳು ಮೆರವಣಿಗೆಯ ಆಕರ್ಷಣೆಯಾಗಲಿವೆ. ನಿಶಾನೆ ಆನೆ ಗೋಪಿ ನೇತೃತ್ವದಲ್ಲಿ ಮಹೇಂದ್ರ, ಲಕ್ಷ್ಮಿ, ಗಜೇಂದ್ರ, ಸುಗ್ರೀವ, ಕಂಜನ್ ಹಾಗೂ ಏಕಲವ್ಯ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor