RSS ಕಚೇರಿಯಲ್ಲೇ ಫಾರಂ-7 ಮುದ್ರಣವಾಗುತ್ತಿದೆ : ಶಾಸಕ ತನ್ವೀರ್ ಸೇಠ್ ಆರೋಪ
ಮೈಸೂರು : RSS ಕಚೇರಿಯಲ್ಲೇ ಫಾರಂ-7 ಮುದ್ರಣವಾಗುತ್ತಿದ್ದು, ಅಲ್ಲಿಂದ ಬಿಜೆಪಿಯವರ ಕೈಗೆ ತಲುಪುತ್ತಿದೆ. ದಲಿತರು, ಮುಸ್ಲಿಮರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾರಂ-7 ದುರುಪಯೋಗದ ಆರೋಪ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ತನ್ವೀರ್ ಸೇಠ್ ಗಂಭೀರ ಆರೋಪ ಮಾಡಿದ್ದಾರೆ.
RSS ನಿರ್ದೇಶನದಂತೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಂಚು ನಡೆಯುತ್ತಿದೆ. ನರಸಿಂಹರಾಜ ಕ್ಷೇತ್ರದಲ್ಲಿ ಈವರೆಗೆ ಸುಮಾರು 10 ಸಾವಿರ ಮತದಾರರ ಹೆಸರುಗಳನ್ನು ಅಳಿಸಲು ಅರ್ಜಿಗಳನ್ನು ಸಲ್ಲಿಸಲಾಗಿದೆ. ಕ್ಷೇತ್ರ ಅಥವಾ ವಾರ್ಡ್‌ಗೆ ಸಂಬಂಧವಿಲ್ಲದವರೇ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರತಿ ಮತಗಟ್ಟೆಯಲ್ಲೂ 100 ರಿಂದ 150 ಅರ್ಜಿಗಳನ್ನು ಸಲ್ಲಿಸಲಾಗಿದೆ. ದಲಿತರು ಮತ್ತು ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ. ತಮಗೆ ಬೇಕಾದವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.