Hunsur | ಹೆಂಡತಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆ

Update: 2026-07-21 14:59 IST

ಮೈಸೂರು/ಹುಣಸೂರು : ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ನಡೆದಿದೆ.

ಮೃತರನ್ನು ನಿಶ್ಚಿತ (37), ರಕ್ಷಾ (13), ವರ್ಷಾ (8) ಮತ್ತು ತಂದೆ ಹರೀಶ್ (42) ಎಂದು ಹೇಳಲಾಗುತ್ತಿದೆ.

ಹರೀಶ್ ಕಾರ್ ಶೋರೂಮ್ ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೆ ಸಿಎಸ್ಆರ್ ಆಯಿಲ್ ಮಿಲ್ ಎಂಬ ಘಟಕ ಪ್ರಾರಂಭ ಮಾಡಿದ್ದರು ಎನ್ನಲಾಗಿದೆ.

ಎಂದಿನಂತೆ ಸೋಮವಾರ ರಾತ್ರಿ ಮನೆಗೆ ಬಂದ ಹರೀಶ್, ಹೆಂಡತಿ ಮತ್ತು ಇಬ್ಬರ ಮಕ್ಕಳ ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿಸಿ ಸಾಯಿಸಿ ನಂತರ ತಾನು ಮೇಲಿನ ಮಹಡಿಗೆ ತೆರಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಮಲ್ಲಿಕಾರ್ಜುನ ದಂಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News