×
Ad

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Update: 2024-08-07 13:51 IST

ಮೈಸೂರು, ಆ.7: ಕಾರವಾರದಲ್ಲಿ ಗೋವಾ - ಕಾರವಾರವನ್ನು ಸಂಪರ್ಕಿಸುವ ಕಾಳಿನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಗುಣಮಟ್ಟ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News