×
Ad

ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ: ಮತ್ತೆ ನಾಲ್ವರು ಎಸ್.ಐ.ಟಿ ವಶಕ್ಕೆ

Update: 2024-05-09 18:05 IST

ಎಚ್‌.ಡಿ.ರೇವಣ್ಣ/ ಪ್ರಜ್ವಲ್‌ ರೇವಣ್ಣ

ಮೈಸೂರು : ಹಾಸನದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಅಪಹರಣ ಸಂಬಂಧ ಮತ್ತೆ ನಾಲ್ವರನ್ನು ಎಸ್.ಐ.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸತೀಶ್ ಬಾಬು ಅವರನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಅಪಹರಣಕ್ಕೆ ಸಹಕರಿಸಿದ್ದಾರೆ ಎನ್ನಲಾದ ಸುಜಯ್ ಹೆಬ್ಬಾಳು, ಕೀರ್ತಿ ಹೊಸೂರು, ಮನು, ತಿಮ್ಮಪ್ಪ ಎಂಬುವವರನ್ನು ಎಸ್.ಐ.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ನಾಲ್ವರು ಸತೀಶ್ ಬಾಬು ಜೊತೆಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು, ಸುಜಯ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು, ಭವಾನಿ ರೇವಣ್ಣ ಅವರ ಸಂಬಂಧಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News