×
Ad

ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ಆರೋಗ್ಯ, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ : ಸಚಿವ ದಿನೇಶ್ ಗುಂಡೂರಾವ್

Update: 2024-06-19 14:23 IST

ಮೈಸೂರು : ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಗಮನಹರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ರಾಜ್ಯದ ಹಲವೆಡೆ ಭ್ರೂಣಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿರುವ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ನಮ್ಮ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂಗಳು ಹದ್ದಿನ ಕಣ್ಣಿಟ್ಟು ಗಮನ ಹರಿಸುತ್ತಿದ್ದಾರೆ" ಎಂದು ತಿಳಿಸಿದರು.

ಎಲ್ಲೆಲ್ಲಿ ಭ್ರೂಣಹತ್ಯೆ ನಡೆಯುತ್ತಿತ್ತೊ, ಆ ಎಲ್ಲಾ ಕಡೆಯೂ ದಾಳಿ ಮಾಡಿ ಹಿಡಿದಿದ್ದೇವೆ. ನಮ್ಮ ಇಲಾಖೆಯಿಂದ ತಪ್ಪು ಮಾಡಿದವರನ್ನು ಪತ್ತೆ ಮಾಡುತ್ತೇವೆ. ಇಂತವರಿಗೆ ಕೋರ್ಟ್ ಮೂಲಕ ಶಿಕ್ಷೆ ಆಗಬೇಕು ಎಂದು ಹೇಳಿದರು.

ಹೆರಿಗೆ ಆಸ್ಪತ್ರೆಗಳಲ್ಲಿ ಹಣ ಪಡೆಯುವ ವಿಚಾರ ನಮ್ಮ ವ್ಯವಸ್ಥೆಯಲ್ಲಿ ಇಂದಿಗೂ ನಡೆಯುತ್ತಿದೆ. ಎಲ್ಲವೂ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಇದನ್ನು ಕೂಡ ಗಮನ ಹರಿಸಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News