×
Ad

ಸಿಎಂ ಬದಲಾವಣೆ ವಿಚಾರ ಇನ್ನು ಮುಗಿದ ಕಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2025-07-11 20:17 IST

ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು : ʼರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಇನ್ನು ಮುಗಿದ ಕಥೆಯಾದ್ದರಿಂದ ಅದರ ಬಗ್ಗೆ ನಾವು ಯಾರೂ ಮಾತನಾಡಬಾರದುʼ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅಲ್ಲಿಗೆ ಎಲ್ಲಾ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆಯ ಬಗ್ಗೆ ನಾವು ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದರು.

ಸೆಪ್ಟೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಿದೆ. ಮತ್ತೆ ಮತ್ತೆ ಅದನ್ನೇ ಕೇಳಬೇಡಿ ಎಂದರು.

ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮೀ ಹಣ ಕೊಡುತ್ತೇವೆ ಎಂದು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಪ್ರತೀ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ವರೆಗೂ ಸಂಪೂರ್ಣವಾಗಿ ಹಣ ಹಾಕಿದ್ದೇವೆ. ನಮಗೆ ಹಣ ಹಾಕಲು ಯಾವ ತೊಡಕುಗಳು ಇಲ್ಲ. ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಸ್ಪಷ್ಟೀಕರಣ ಕೇಳಲು ಅವರಿಗೆ ನಾನು ಫೋನ್ ಮಾಡಿದೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಾಗ ಯಾಕೆ ಆ ರೀತಿ ಹೇಳಿದ್ದೀರಾ ಎಂದು ಕೇಳುತ್ತೇನೆ. ನಾವು ಜನರಿಗೆ ಮಾತು ಕೊಟ್ಟಂತೆ ಹಣ ಹಾಕುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News