×
Ad

ಮೈಸೂರು: ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆ

Update: 2025-06-10 22:52 IST

ಮೈಸೂರು: ಮಹಿಳೆ ಹಾಗೂ ಅವರ ಪುತ್ರಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತಪಟ್ಟವರು.

ಇಬ್ಬರ ಸಾವಿಗೆ ಮಹಿಳೆಯ ಪತಿಯೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮದುವೆ ಆಗಿ 22 ವರ್ಷವಾದರೂ ಪತಿ ಜಯರಾಮು ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ. ಜಯರಾಮು ಈ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡುತ್ತಲೇ ಇದ್ದ. ಪತಿಯ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದರೆಂದು ಹೇಳಲಾಗಿದೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News