×
Ad

ಸಿಎಂ ಸಿದ್ದರಾಮಯ್ಯ ಭೇಟಿ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-04-13 23:18 IST

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಬಂದಿದ್ದು ಸಂತೋಷ ಆಗಿದೆ. ಸಿದ್ದರಾಮಯ್ಯ ಜೊತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಳೆಯ ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ಬರುವುದು ಇಲ್ಲ. ನಾನು ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಜೊತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರ ಭೇಟಿ ನನಗೆ ಸಹಜವಾಗಿ ಖುಷಿ ಕೊಟ್ಟಿದೆ. ಅವರು ನನ್ನ ಬೆಂಬಲ ಕೇಳಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ  ಎಂದು ಹೇಳಿದ್ದೇನೆ. ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆ ಉತ್ತಮವಾದ ವಾತಾವರಣ ಇದೆ. ಬಹಿರಂಗವಾಗಿ ಯಾವುದೇ ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News