×
Ad

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು

Update: 2024-08-28 16:48 IST
ಸಿದ್ದರಾಮಯ್ಯ (PTI)

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಹಿ ಮಾಡಲಾಗಿರುವ ದಾಖಲೆ ಸೃಷ್ಟಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತು ಸಹಚರರ ವಿರುದ್ಧ ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬುಧವಾರ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಡಾ ಪ್ರಕರಣ ಹೊರಬರುತ್ತಿದ್ದಂತೆ ನಕಲಿ ದಾಖಲೆ ಸೃಷ್ಟಿಸಿ ಕಡತ ನಾಶಕ್ಕೆ ಯತ್ನಿಸಲಾಗಿದೆ. ಪಾರ್ವತಿ ಅವರು ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚೆಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಪತ್ರದಲ್ಲಿ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News