×
Ad

ಮುಡಾ ಪ್ರಕರಣ: ರಿಯಲ್ ಎಸ್ಟೇಟ್ ಉದ್ಯಮಿಯ ಕಚೇರಿ ಮೇಲೆ ಇ.ಡಿ. ದಾಳಿ

Update: 2024-10-29 13:16 IST

PC : @dir_ed

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಮಂಗಳವಾರ ಎಂ.ಎಂ.ಜಿ. ಕನ್ ಸ್ಟ್ರಕ್ಷನ್ ರಿಯಲ್ ಎಸ್ಟೇಟ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ನಗರದ ಕುವೆಂಪು ನಗರದಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಜಯರಾಂ ಎಂಬವರಿಗೆ ಸೇರಿದ ಎಂ.ಎಂ.ಜಿ. ಕನ್ ಸ್ಟ್ರಕ್ಷನ್ ರಿಯಲ್ ಎಸ್ಟೇಟ್ ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

50:50 ಅನುಪಾತದಲ್ಲಿ ಮುಡಾದಿಂದ ನಿವೇಶನ ಪಡೆದಿರುವ ಆರೋಪ ಎದುರಿಸುತ್ತಿರುವ ಎಂ.ಎಂ.ಜಿ ಕನ್ಷ್ಟ್ರಕ್ಷನ್ ಕಚೇರಿಗೆ 5 ಈ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ನಿನ್ನೆಯಿಂದ ಮೈಸೂರಿನ ಹಲವರ ಮನೆ ಮೇಲೆ ದಾಳಿ ನಡೆಸಿರುವ ಈ.ಡಿ. ಅಧಿಕಾರಿಗಳ ತಂಡ ಇಂದು ಕೂಡಾ ಕಾರ್ಯಾಚರಣೆ ಮುಂದುವರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News