×
Ad

ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ

Update: 2023-12-11 23:43 IST

ಮೈಸೂರು,ಡಿ.11: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. 

ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ರಾಜೇಶ್ ಎಂಬುವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ್ದು, ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗಳಾಗಿವೆ. ಇವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಹುಲಿ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ

ಮೈಸೂರು ತಾಲೂಕಿನಲ್ಲಿ ಭೀತಿ ಹುಟ್ಟಿಸಿರುವ ಹುಲಿ ಸೆರೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಚಿಕ್ಕಕಾನ್ಯ ಗ್ರಾಮ, ದೊಡ್ಡಕಾನ್ಯ ಬ್ಯಾತಹಳ್ಳಿ, ಸಿಂದುವಳ್ಳಿ ಗ್ರಾಮದ ಸುತ್ತಮುತ್ತ ಹುಲಿ ಕಾಣಿಸಿಕೊಂಡ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುಲಿ ಸೆರೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಶೇಷ ರಕ್ಷಣಾ ದಳ, ಚಿರತೆ ಕಾರ್ಯಪಡೆ ಭಾಗಿಯಾಗಿದ್ದು, ಕ್ಯಾಮರಾಗಳ ಮೂಲಕ ಹುಲಿ ಚಲನವಲನ ಪತ್ತೆ ಹಚ್ಚುತ್ತಿದ್ದಾರೆ. ಅನಗತ್ಯವಾಗಿ ಹೊರಗೆ ಓಡಾಡದಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಮನವಿ ಮಾಡಿದ್ದು, ಹುಲಿ ಸೆರೆ ಕಾರ್ಯಾಚರಣೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News