×
Ad

ಮೈಸೂರು | ಕುರಿ ಮೇಯಿಸುತ್ತಿದ್ದ ಮಹಿಳೆ ಹುಲಿ ದಾಳಿಗೆ ಬಲಿ

Update: 2024-05-26 14:03 IST

ಚಿಕ್ಕಿ (48)

ಮೈಸೂರು : ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಹೊತ್ತೊಯ್ದು ಸಾಯಿಸಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ ಸಂಜೆ ನಡೆದಿದ್ದು, ಮಹಿಳೆಯ ಮೃತದೇಹ ರವಿವಾರ ಬೆಳಿಗ್ಗೆ ಅಲ್ಲಿಂದ ಸ್ಬಲ್ಪ ದೂರದಲ್ಲಿರುವ ಅರಣ್ಯ ವೀಕ್ಷಣೆಯ ಟವರ್ ಬಳಿ ಪತ್ತೆಯಾಗಿದೆ.

ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರು. ಮಹಿಳೆಯೊಂದಿಗೆ ಕುರಿ ಮೇಯಿಸುತ್ತಿದ್ದ ಸಹಚರ ಗ್ರಾಮಕ್ಕೆ ತೆರಳಿ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಮೃತದೇಹಕ್ಕಾಗಿ ಹುಡುಕಾಟ ನಡೆದರೂ ಕತ್ತಲು ಆವರಿಸಿದ್ದರಿಂದ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಅರಣ್ಯ ವೀಕ್ಷಣೆಯ ಟವರ್ ಬಳಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News