×
Ad

ಮೈಸೂರು| ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡಿದ ಆರೋಪ: ಡ್ಯಾನ್ಸ್ ಮಾಸ್ಟರ್ ಬಂಧನ

Update: 2023-12-10 19:05 IST

ಮೈಸೂರು: ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡಿದ ಆರೋಪದಡಿ ವ್ಯಕ್ತಿಯೋರ್ವನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

36 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಕುವೆಂಪು ನಗರ ನಿವಾಸಿ ಡ್ಯಾನ್ಸ್ ಮಾಸ್ಟರ್ ಕಾರ್ತಿಕ್ ಉಪಮನ್ಯು ಎಂಬಾತನನ್ನು ಬಂಧಿಸಲಾಗಿದೆ. ಸದ್ಯ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತೆ, ಕಾರ್ತಿಕ್ ನಡೆಸುತ್ತಿದ್ದ ಡ್ಯಾನ್ಸ್ ಕ್ಲಾಸ್‍ಗೆ ನಾನು ಸೇರಿಕೊಂಡಿದ್ದೆ. ನನ್ನ ಕೌಟುಂಬಿಕ ಸಮಸ್ಯೆಯ ಬಗ್ಗೆ ತಿಳಿದುಕೊಂಡು ಸಹಾಯ ಮಾಡುವುದಾಗಿ ಮನೆಗೆ ಬಂದು ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ದುಷ್ಕೃತ್ಯದ ವಿಡಿಯೋ ಮಾಡಿಕೊಂಡು, ಈ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿದ್ದಾರೆ. ಜೊತೆಗೆ 1.85 ಲಕ್ಷ ರೂ. ಹಣವನ್ನು ನನ್ನ ಬ್ಯಾಂಕ್ ಖಾತೆಯಿಂದ ಹಾಕಿಸಿಕೊಂಡಿದ್ದಾನೆ. ಈ ಬಗ್ಗೆ ನನ್ನ ಪತಿಗೆ ತಿಳಿದ ಮೇಲೆ ಅವರು ನಮ್ಮ ತಂಟೆಗೆ ಬಾರದಂತೆ ಕಾರ್ತಿಕ್‍ಗೆ ಎಚ್ಚರಿಕೆ ನೀಡಿದ್ದರು. ಆದರೂ ಆರೋಪಿ ನನ್ನ ಪತಿಗೂ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News