×
Ad

ಮೈಸೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಯುವಕನ ಬಂಧನ

Update: 2024-08-16 22:12 IST

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ನಂಜನಗೂಡು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಂಜನಗೂಡು ಪಟ್ಟಣದ ಕೆ.ಎಚ್.ಬಿ.ಕಾಲೋನಿಯ ನಿವಾಸಿ ಆದರ್ಶ್(20) ಎಂದು ಗುರುತಿಸಲಾಗಿದೆ..

ಆರೋಪಿಯು ತಮ್ಮ ಮಗಳ ಮೇಲೆ  ದೌರ್ಜನ್ಯವೆಸಗಿರುವ ಕುರಿತು ಬಾಲಕಿಯ ತಾಯಿ ನಂಜನಗೂಡು ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಪೊಲೀಸರು ಯುವಕನನ್ನು ಬಂಧಿಸಿ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದು, ಶುಕ್ರವಾರ ರಾತ್ರಿಯೇ ಜಿಲ್ಲಾ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರುಪಡಿಸಿದ್ದಾರೆ.

ನಂಜನಗೂಡು ಡಿವೈಎಸ್ಪಿ ರಘು ಅವರ ಸೂಚನೆ ಮೇರೆಗೆ ಪಿಎಸ್‌ಐ ಪ್ರಕಾಶ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News