×
Ad

ಮೈಸೂರು | ಮಲ್ಲನಮೂಲೆ ಮಠದ ಚನ್ನಬಸವ ಸ್ವಾಮೀಜಿ ನಿಧನ

Update: 2025-11-11 10:47 IST

ಮೈಸೂರು,ನ. 11: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಬಸವನಪುರದ ಮಲ್ಲನ ಮೂಲೆ ಸುಕ್ಷೇತ್ರ ಶ್ರೀ ಗುರು ಕಂಬಳೇಶ್ವರ ಮಠಾಧ್ಯಕ್ಷರಾಗಿದ್ದ ಚನ್ನಬಸವ ಸ್ವಾಮಿಜಿಯವರು ವಯೋ ಸಹಜ ದಿಂದ ಸೋಮವಾರ ರಾತ್ರಿ ನಿಧನರಾದರು.

ಅವರಿಗೆ 83 ವರ್ಷ ವಯಸ್ಸಾಗಿತ್ತು. ಸೋಮವಾರ ರಾತ್ರಿಯಿಂದ ಮಂಗಳವಾರ ಸಂಜೆ ಅಂತ್ಯಸಂಸ್ಕಾರದವರೆಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ದರ್ಶನಕ್ಕೆ ಮಠದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಬಸವನಪುರ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಅಂತಿಮ ನಮನ ಸಲ್ಲಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ :

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಂಗಳವಾರ ಬೆಳಿಗ್ಗೆ ಮಲ್ಲನ ಮೂಲೆ ಮಠಕ್ಕೆ ತೆರಳಿ ಶ್ರೀಗಳ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಮಠಾಧೀಶರ ನಿಧನ ಅತೀವ ದುಃಖ ಉಂಟು ಮಾಡಿದೆ ಎಂದು ಸಚಿವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News