×
Ad

ಮೈಸೂರು: ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿಂದು ಕಾಲೇಜು ದಿನಗಳನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ

Update: 2024-05-24 12:42 IST

ಮೈಸೂರು, ಮೇ.24: ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಂಡಿ ತಿಂದು ತಮ್ಮ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡು ಭಾವುಕವಾಗಿ 'X'ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಗರದ ನಝರಬಾದ್ ನಲ್ಲಿರುವ ಮೈಲಾರಿ ಹೋಟೆಲ್ ಗೆ ಶುಕ್ರವಾರ ಬೆಳಗ್ಗೆ ತೆರಳಿದ ಸಿದ್ಧರಾಮಯ್ಯ ದೋಸೆ, ಇಡ್ಲಿ ಸವಿದರು.


ಈ ಬಗ್ಗೆ 'X'ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, "ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ'' ಎಂದು ಹೇಳಿದ್ದಾರೆ.

"ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು" ಎಂದು ಅಭಿಪ್ರಾಯಿಸಿದ್ದಾರೆ.

ಈ ವೇಳೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಕೆ.ಮರೀಗೌಡ ಉಪಸ್ಥಿತರಿದ್ದರು.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28  ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News