×
Ad

ಮೈಸೂರು | ಸಾರಿಗೆ ಬಸ್​ ಪಲ್ಟಿ : ಮೂವರ ಸ್ಥಿತಿ ಗಂಭೀರ, ಹಲವರಿಗೆ ಗಾಯ

Update: 2024-06-30 15:46 IST

ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್​ವೊಂದು ಪಲ್ಟಿಯಾಗಿದೆ.  ಪರಿಣಾಮ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗೇಟ್ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಮೈಸೂರು ನಗರ ಸಾರಿಗೆ ಬಸ್ ರವಿವಾರ ಮರಡಿ ಹುಂಡಿ ಗೇಟ್ ಬಳಿ ತಿರುವು ಪಡೆದುಕೊಳ್ಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.‌ ಬಸ್‌ನಲ್ಲಿ ಸಂಚರಿಸುತ್ತಿದ್ದ 50ಕ್ಕೂ ಹೆಚ್ಚು ಮಂದಿಯಲ್ಲಿ ಸುಮಾರು 23 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಗ್ರಾಮಸ್ಥರು ನಗರದ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಯೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಚಾಲಕನ ಅಜಾಗೂರುಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎನ್ನಲಾಗಿದೆ.  ಬಿಳಿಗರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Delete Edit
Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News