×
Ad

‌ಮೈಸೂರು | ಕಬಿನಿ ಜಲಾಶಯಕ್ಕೆ ಸಿದ್ದರಾಮಯ್ಯ, ಡಿಕೆಶಿ ಬಾಗಿನ ಅರ್ಪಣೆ

Update: 2024-07-29 17:21 IST

ಮೈಸೂರು : ಮೈದುಂಬಿ ಹರಿಯುತ್ತಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಬೀಚನಹಳ್ಳಿಯಲ್ಲಿ ಬಾಗಿನ ಅರ್ಪಿಸಿದರು.

ಕೆ.ಆರ್.ಎಸ್ ಜಲಾಯಶಕ್ಕೆ ಬಾಗಿನ ಅರ್ಪಪಿಸಿ ಬಳಿಕ ಮೈಸೂರಿನ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮಕ್ಕೆ ಆಗಮಿಸಿದ ಅವರು ತುಂಬಿ ಹರಿಯುತ್ತಿದ್ದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ನಾಡಿನ ರೈತರ ಸುಭಿಕ್ಷೆಗೆ ಹರಸಿ ಕೈ ಮುಗಿದರು.

ಇದೇ ವೇಳೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರುಗಳಾದ ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಿ.ರವಿಶಂಕರ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News