Mysuru | ಮಹರಾಜ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಸಂಜೆ 4 ಗಂಟೆ ನಂತರ ಕಣಿಯಯ್ಯನ ಹುಂಡಿಯಲ್ಲಿ ಅಂತ್ಯಕ್ರಿಯೆ
Update: 2026-07-12 12:20 IST
ಮೈಸೂರು : ನಿನ್ನೆ ನಿಧನರಾದ ಖ್ಯಾತ ಹಿನ್ನಲೆ ಗಾಯಕಿ ಎಸ್.ಜಾನಕಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಮಹರಾಜ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆಯಿಂದಲೇ ಸಾರ್ವಜನಿಕರು ಅಭಿಮಾನಿಗಳು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಜಿಲ್ಲಾಡಳಿತ ಮತ್ತು ಪೊಲೀಸರು ಅಂತಿಮ ದರ್ಶನಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈಗಾಗಲೇ ಚಲನಚಿತ್ರ ನಟರು, ನಿರ್ದೇಶಕರು, ಗಾಯಕ, ಗಾಯಕಿಯರು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಮಧ್ಯಾಹ್ನ 3 ಗಂಟೆ ವರೆಗೆ ಮಹರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಎಚ್.ಡಿ.ಕೋಟೆ ತಾಲ್ಲೂಕಿನ ಕಣಿಯಯ್ಯನ ಹುಂಡಿಯಲ್ಲಿರುವ ನವೀನ್ ಎಂಬವರ ತೋಟದಲ್ಲಿ ಸಂಜೆ 4 ಗಂಟೆಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.