×
Ad

ಮೈಸೂರು: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ-ಯಡಿಯೂರಪ್ಪ!

Update: 2024-05-11 14:40 IST

ಮೈಸೂರು, ಮೇ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದರು.

ನಗರದ ಮಾನಂದವಾಡಿ ರಸ್ತೆಯಲ್ಲಿರುವ ಅಂಬೇಡ್ಕರ್ ಎಜುಕೇಶನಲ್ ಕಲ್ಚರಲ್ ಟ್ರಸ್ಟ್ ಆವರಣದಲ್ಲಿ ಮಾಜಿ ಸಚಿವ ದಿವಂಗತ ವಿ.ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ದಾಂಜಲಿ ಕಾರ್ಯಕ್ರಮದ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಸಾವಿರ ನುಡಿನಮನ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡ ಸಿಎಂ- ಮಾಜಿ ಸಿಎಂ ಅಕ್ಕ ಪಕ್ಕ ಕುಳಿತು ಕುಶಲೋಪರಿ ವಿಚಾರಿಸಿದರು.

ಯಡಿಯೂರಪ್ಪ ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

ವಿ.ಶ್ರೀನಿವಾಸ್ ಪ್ರಸಾದ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

 

 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News