×
Ad

Mysuru | ಹಳೇ ದ್ವೇಷ: ವಿದ್ಯಾರ್ಥಿನಿಗೆ ಸೋದರ ಮಾವನಿಂದಲೇ ಹಲ್ಲೆ; ಪ್ರಕರಣ ದಾಖಲು

Update: 2026-03-02 15:26 IST

ಮೈಸೂರು: ಹಳೇ ದ್ವೇಷಯ ಕಾರಣ ಪಿಯು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸೋದರ ಮಾವ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಈಕೆ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ಏಕಾಏಕಿ ಮನೆಗೆ ನುಗ್ಗಿದ ಸೋದರ ಮಾವ ಸೋಮಣ್ಣ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೂ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸೋದರ ಮಾವನ ಆಶ್ರಯದಲ್ಲಿ ಬೆಳೆಯುತ್ತಿರುವ ನಾನು ಓದಬಾರದು, ಉತ್ತಮಭವಿಷ್ಯ ರೂಪಿಸಿಕೊಳ್ಳಬಾರದು ಎಂದು ಸೋಮಣ್ಣ ಹಲ್ಲೆ ಮಾಡಿದ್ದಾರೆ ಎಂದು ಪೂರ್ಣಿಮಾ ಆರೋಪಿಸಿದ್ದಾರೆ.

ಸದ್ಯ ಪೂರ್ಣಿಮಾ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಸೋಮಣ್ಣ ಸೇರಿ ಏಳು ಮಂದಿಯ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News