×
Ad

ಮೈಸೂರು: ಮಠದ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಇರಿದು ಸ್ವಾಮೀಜಿ ಹತ್ಯೆ

Update: 2024-06-10 15:03 IST

ಮೈಸೂರು, ಜೂ.10: ಹಿರಿಯ‌ ಸ್ವಾಮೀಜಿಯೊಬ್ಬರನ್ನು ಮಠದ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾದ ಘಟನೆ ಸಿದ್ದಾರ್ಥನಗರದಲ್ಲಿ ನಡೆದಿದೆ.

ಹತ್ಯೆಗೀಡಾದ ಸ್ವಾಮೀಜಿಯನ್ನು ಸಿದ್ದಾರ್ಥನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಎಂದು ಗುರುತಿಸಲಾಗಿದೆ.

ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ(60) ಎಂಬಾತ ಸ್ವಾಮೀಜಿಯವರನ್ನು ಹತ್ಯೆ ಮಾಡಿದ್ದಾನೆಂದು ಮಠದಲ್ಲಿದ್ದ‌ ಕೆಲವರು ಆರೋಪಿಸಿದ್ದಾರೆ.

ಮಠಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿಗಳು ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 ಕೊಲೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.   ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಮಠದದಲ್ಲಿದ್ದವರು ಆಗ್ರಹಿಸಿದ್ದಾರೆ. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News