×
Ad

ಮೈಸೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Update: 2026-01-20 11:50 IST

ಮೈಸೂರು: ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಸಿಯಾ ನಗರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಗೌಸಿಯಾ ನಗರ ನಿವಾಸಿ ಎಂ.ಡಿ.ಶಹಬಾಜ್ (26) ಕೊಲೆಯಾದ ಯುವಕ. ಈತ ಫ್ಯಾಬ್ರಿಕೇಶನ್ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ.

ಸೋಮವಾರ ತಡರಾತ್ರಿ ಶಹಬಾಜ್ ಮೇಲೆ ಸ್ಥಳೀಯರಾದ ಜುಬೇರ್ ಮತ್ತು ಇತರರು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವ್ಯವಹಾರಿಕ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಆರೋಪಿಗಳ ಪತ್ತೆಗಾಗಿ ಈಗಾಗಲೇ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ  ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News