×
Ad

ನಂಜನಗೂಡು | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

Update: 2025-10-18 20:31 IST

ಮೈಸೂರು : ಕೆರಗೆ ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದಲ್ಲಿ ನಡೆದಿದೆ.

ಬದನವಾಳು ಗ್ರಾಮದ ಮೋಹಿತ್ (8), ಆರ್ಯ (9), ಮೃತ  ಬಾಲಕರು.

ಶನಿವಾರ ಈ ಇಬ್ಬರು ಬಾಲಕರು ಬದನವಾಳುವಿನಲ್ಲಿರುವ ಕೆರೆಗೆ ಈಜಲು ಸೈಕಲ್ ನಲ್ಲಿ ತೆರಳಿದ್ದಾರೆ. ಕೆರೆಯ ಬಳಿ ಬಟ್ಟೆಯನ್ನು ಬಿಚ್ಚಿ ಈಜಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ಕೆರೆಯ ಸುಳಿಗೆ ಸಿಲುಕಿ ಬಾಲಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಬಾಲಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News