ಮೈಸೂರಿನಲ್ಲಿ ನೂತನ ಆಂಬುಲೆನ್ಸ್ ಸೇವೆಗೆ ಚಾಲನೆ

Update: 2026-08-07 14:40 IST

ಮೈಸೂರು : ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯ ವತಿಯಿಂದ ಮೈಸೂರಿನಲ್ಲಿ ನೂತನ ಆಂಬುಲೆನ್ಸ್‌ಗಳ ಸೇವೆಗೆ ಶುಕ್ರವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆಂಬುಲೆನ್ಸ್ ಸೇವೆಯ ವಿಸ್ತರಣೆಯಿಂದ ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ.ಆರ್. ನಗರದ ಶಾಸಕರಾದ  ರವಿಶಂಕರ್, ಮಾಜಿ ಶಾಸಕರಾದ ಹೆಚ್.ಪಿ. ಮಂಜುನಾಥ್, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ, ಕೆಪಿಸಿಸಿ ವಕ್ತಾರರಾದ  ಎಂ. ಲಕ್ಷ್ಮಣ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News