×
Ad

ಗ್ಯಾರಂಟಿಗಳಿಂದ ಭಯೋತ್ಪಾದನೆ: ಶಾಸಕ ಜಿ.ಟಿ.ದೇವೇಗೌಡ

Update: 2024-04-15 15:53 IST

ಮೈಸೂರು, ಎ.15: ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳು ಭಯೋತ್ಪಾದಕರ ಗ್ಯಾರಂಟಿ. ಇದು ಭಯೋತ್ಪಾದಕರ ಉತ್ಪಾದನೆ ಮಾಡುತ್ತವೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಪ್ರಧಾನಿ ಮೋದಿ ಬಿರುಗಾಳಿಗೆ ಗ್ಯಾರಂಟಿ ಗಾಳಿಯಲ್ಲಿ ತೂರಿ ಹೋಗಲಿವೆ. 10 ತಿಂಗಳ ಆಡಳಿತದಲ್ಲಿ ಗ್ಯಾರಂಟಿ ಬಿಟ್ಟರೆ ಯಾವುದೇ ಅಭಿವೃದ್ಧಿ ಇಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಜಿ.ಟಿ.ದೇವೇಗೌಡ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ 28 ಸ್ಥಾನಗಳನ್ನು ಎನ್ ಡಿಎ ಗೆಲ್ಲಲಿದೆ. ಇಡೀ ದೇಶದಲ್ಲಿಯೇ ಕಾಂಗ್ರೆಸ್ 60-70ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲುವುದಿಲ್ಲ. ಅದಕ್ಕೆ ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಪ್ರಧಾನಿ ಮೋದಿ ಬೈಯುವುದೇ ಕಾಂಗ್ರೆಸ್ ಗ್ಯಾರಂಟಿಯಾಗಲಿದೆ ಎಂದು ಟೀಕಾ ಪ್ರಹಾರ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News