×
Ad

ಬಿ.ಆರ್.ಭಾಸ್ಕರ್ ಪ್ರಸಾದ್, ವಕೀಲ ಅರುಣ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

Update: 2025-05-27 23:45 IST

ಸಾಂದರ್ಭಿಕ ಚಿತ್ರ

ಮೈಸೂರು : ಮಾದಿಗ ಮತ್ತು ಹೊಲೆಯ ಸಮುದಾಯದ ನಡುವೆ ಸಂಘರ್ಷ ಉಂಟು ಮಾಡುವ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಿ.ಆರ್.ಭಾಸ್ಕರ್ ಪ್ರಸಾದ್ ಮತ್ತು ವಕೀಲ ಅರುಣ್ ಕುಮಾರ್ ಸೇರಿದಂತೆ ಇತರರ ಮೇಲೆ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ಅಶೋಕಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿ.ಆರ್.ಭಾಸ್ಕರ್ ಪ್ರಸಾದ್ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ.ಮಹದೇವಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದು, ವಕೀಲ ಅರುಣ್ ಕುಮಾರ್ ಅವರು ಸಂವಿಧಾನ ಪೀಠಿಕೆ ಬಗ್ಗೆಯೂ ಬಹಳ ಹಗುರವಾಗಿ ಮಾತನಾಡಿದ್ದಾರೆ. ಜೊತೆಗೆ ಹೊಲೆಯ ಸಮುದಾಯದ ವಿರುದ್ಧ ಮಾದಿಗ ಸಮುದಾಯದವರನ್ನು ಎತ್ತಿಕಟ್ಟುವ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ್ದಾರೆ. ಹಾಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News