×
Ad

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ನಿಷ್ಠಾವಂತರಿಗೆ ಅವಮಾನವಾದರೆ ಆತ್ಮಹತ್ಯೆ: ತೋಟದಪ್ಪ ಬಸವರಾಜು ಎಚ್ಚರಿಕೆ

Update: 2025-06-30 12:45 IST

ತಿ.ನರಸೀಪುರ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೊರಗಿನವರನ್ನು ಮಾಡಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಮಾನ ಮಾಡಿದರೆ ಕಚೇರಿ ಮುಂದೆ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವರುಣಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ವಿವೇಕಾನಂದ ನಗರದ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ಅವರ ಅವಧಿ ಮುಗಿದಿಲ್ಲ. ಅವಧಿಗೂ ಮೊದಲು ಅವರನ್ನು ಬದಲಾವಣೆ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಅವಧಿ ಮುಗಿದ ಬಳಿಕ ಬದಲಾವಣೆ ಮಾಡುವುದಾದರೆ ಶ್ರೀರಾಮುಲು ಅಥವಾ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಈಶ್ವರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೂ ಸ್ವಾಗತ. ಇಲ್ಲದಿದ್ದರೆ ಬಿ.ವೈ.ವಿಜಯೇಂದ್ರ ಅವರನ್ನೇ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.

ಕೇಂದ್ರ ವರಿಷ್ಠರು ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಹೊರಟಿದ್ದಾರೆಂದು ಹೇಳಲಾಗುತ್ತಿದ್ದು, ಹೀಗೆ ಆದರೆ ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಅಪಮಾನವಾಗಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News