ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ: ಸಂಸದ ಸುನೀಲ್ ಬೋಸ್
ತಿ.ನರಸೀಪುರ : ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತೇವೆ ಎಂದು ನನ್ನ ತಂದೆಯಾಗಲಿ ಅಥವಾ ನಾನಾಗಲಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ನಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಇಂತಹ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಸಂಸದ ಸುನೀಲ್ ಬೋಸ್ ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ನನ್ನ ತಂದೆಗೆ ಉನ್ನತ ಸ್ಥಾನಮಾನಗಳನ್ನು ನೀಡಿದೆ. ಅಲ್ಲದೆ, ನನ್ನನ್ನು ಸಂಸದನ್ನಾಗಿ ಮಾಡಿದೆ. ಪಕ್ಷದಿಂದ ನಮಗೆ ಯಾವುದೇ ಅನ್ಯಾಯವಾಗಿಲ್ಲ. ಹೀಗಿರುವಾಗ ಪಕ್ಷ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.