ಪಿರಿಯಾಪಟ್ಟಣ | ಸ್ನಾನ ಮಾಡುವಾಗ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಹೋದರಿಯರು ಮೃತ್ಯು
Update: 2025-10-25 10:49 IST
ಸಾಂದರ್ಭಿಕ ಚಿತ್ರ
ಮೈಸೂರು : ಒಟ್ಟಿಗೆ ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಗುಲ್ಫಾಮ್ (23), ಸಿಮ್ರಾನ್ ತಾಜ್(20) ಎಂದು ಗುರುತಿಸಲಾಗಿದೆ.
ಗುಲ್ಫಾಮ್, ಸಿಮ್ರಾನ್ ತಾಜ್ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು, ಈ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಇತ್ತ ಬಹಳ ಸಮಯವಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗಮಧ್ಯದಲ್ಲೇ ಇಬ್ಬರು ಮೃತಪಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.