ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ
Update: 2025-09-01 16:16 IST
ಮೈಸೂರು : ಮಾನಸ ಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು(ಸೆ.1) ಮೈಸೂರಿಗೆ ಆಗಮಿಸಿದರು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಬಂದಿಳಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪುಷ್ಪಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ರಾಷ್ಟ್ರಪತಿಗಳು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರ್ಯಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ನಂತರ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಗಳ ಆಗಮಿಸಿದ ಹಿನ್ನಲೆಯಲ್ಲಿ ಅವರು ಸಂಚರಿಸುವ ಮಾರ್ಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.