×
Ad

ಆರೆಸ್ಸೆಸ್‌ ಚಟುವಟಿಕೆಗಳಿಗೆ ನಿಷೇಧ; ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ : ಸಿಎಂ ಸಿದ್ದರಾಮಯ್ಯ

"ಬೆದರಿಕೆಗಳಿಗೆ ನಾನೂ ಹೆದರಲ್ಲ; ಪ್ರಿಯಾಂಕ್‌ ಖರ್ಗೆಯವರೂ ಹೆದರುವುದಿಲ್ಲ"

Update: 2025-10-15 16:41 IST

ಸಿಎಂ ಸಿದ್ದರಾಮಯ್ಯ/ಪ್ರಿಯಾಂಕ್‌ ಖರ್ಗೆ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ್‌ ಖರ್ಗೆಯವರು ಖುದ್ದು ತಿಳಿಸಿದ್ದು, ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್‌ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಅವರು ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರೆಸ್ಸೆಸ್‌ ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು, ಪ್ರಿಯಾಂಕ್‌ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

ಬೆದರಿಕೆಗೆ ಹೆದರುವುದಿಲ್ಲ :

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್‌ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಎಲ್ಲ ಶಾಸಕರಿಗೂ ಅನುದಾನ :

ಶಾಸಕರಿಗೆ ಅನುದಾನ ನೀಡುವಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ, ಜೆಡಿಎಸ್ ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ ? ಎಂದು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News