×
Ad

ಪಾಕ್‌ ಮೇಲೆ ನಡೆಸಿದ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಗೆ ಸಲ್ಲಬೇಕು : ಸಿದ್ದರಾಮಯ್ಯ

Update: 2025-05-12 14:08 IST

ಸಿಎಂ ಸಿದ್ದರಾಮಯ್ಯ

ಮೈಸೂರು : ʼಆಪರೇಷನ್ ಸಿಂಧೂರʼ ಕಾರ್ಯಾಚರಣೆಯ ಪೂರ್ಣ ಯಶಸ್ಸು ಭಾರತೀಯ ಸೇನೆಗೆ ಸಲ್ಲಬೇಕು. ಯಾವ ಪಕ್ಷವೂ ಅದನ್ನು ಕ್ಲೇಮ್ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಹೆಲಿಪ್ಯಾಡ್ ನಲ್ಲಿ ಸೋಮವಾರ ಮಾತನಾಡಿದ ಅವರು, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ವಿಚಾರ ಸಂಬಂಧ ಕೇಂದ್ರದ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ.  ಎರಡು ದೇಶಗಳ ಡಿಜಿಎಂಒಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡುತ್ತಾರೆ ಮಾಡಲಿ. ಆ ಬಳಿಕ ಉತ್ತರಿಸುವೆ ಎಂದರು.

ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಆಗಿನ ಸಂದರ್ಭವೇ ಬೇರೆ, ಈಗಿನ ಸಂದರ್ಭವೇ ಬೇರೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕದನ ವಿರಾಮ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ವಿಚಾರ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಘೋಷಣೆ ಆಗಿದೆ . ಅದನ್ನು ಸ್ವಾಗತ ಮಾಡಿದ್ದೇನೆ. ಯುದ್ದದ ಬಗ್ಗೆ ನಾನೇನೂ ಮಾತನಾಡಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News