ಕುತೂಹಲ ಮೂಡಿಸಿದ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಭೇಟಿ
ಮೈಸೂರು : ಸ್ಟಿಂಗ್ ಆಪರೇಷನ್ ಭಾರೀ ಸದ್ದು ಮಾಡುತ್ತಿರುವ ನಡುವೆಯೇ ಶಾಸಕ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬುಧವಾರ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದರು. ಜಾರಕಿಹೊಳಿ ಬಂದಿದ್ದು ಉಭಯ ಕುಶಲೋಪರಿಗೆ. ಬಂದು ಊಟ ಮಾಡಿ ಹೋದ್ರು ಅಷ್ಟೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ಮಾತನಾಡಿ, ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತರಬಾರದಿತ್ತು. ಧೈರ್ಯವಾಗಿ ಎದುರಿಸಿ ಫೈಟ್ ಮಾಡಬೇಕಿತ್ತು ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಯಾವ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ನಾನು ಈಗ ಆ ಸ್ಟಿಂಗ್ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ. ನಾನು ಬೇರೆಯದೇ ವಿಚಾರವಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಖಾಸಗಿ ಭೇಟಿ ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದ್ದಾರೆ.