ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳುತ್ತಿರುವುದು ಬ್ಲಾಕ್‌ಮೇಲ್ ತಂತ್ರಗಾರಿಕೆ : ಎಚ್.ವಿಶ್ವನಾಥ್
Update: 2026-07-28 18:02 IST
ಸಿದ್ದರಾಮಯ್ಯ/ಎಚ್.ವಿಶ್ವನಾಥ್
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳುತ್ತಿರುವುದು ಒಂದು ರೀತಿಯ ಬ್ಲಾಕ್ ಮೇಲ್ ತಂತ್ರಗಾರಿಕೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಭವಿಷ್ಯದ ದೃಷ್ಟಿಯಿಂದ ನಾನು ಚುನಾವಣೆಗೆ ನಿಲ್ಲಲ್ಲ ಎಂದರೆ ಕುರುಬರು ಯಾರು ಓಟ್ ಹಾಕಲ್ಲ ಎಂಬ ರೀತಿಯಲ್ಲಿ ಬಿಂಬಿಸಲು ಹೊರಟಿದ್ದಾರೆ. ಸಿದ್ದರಾಮಯ್ಯನಿಗಾಗಿ ತನು ಮನ ಅರ್ಪಿಸಿದ ಕುರುಬರಿಗೆ ಏನು ಸಿಗಲಿಲ್ಲ. 10 ಲಕ್ಷ ಅಲೆಮಾರಿ ಕುರುಬರಿದ್ದಾರೆ ಯಾರಿಗೂ ಏನು ಮಾಡಲಿಲ್ಲ ಎಂದು ಹರಿಹಾಯ್ದರು.
ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಹೇಳಲಿ. ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಮಾಜಿಕ ಸಮೀಕ್ಷೆ ಮಾಡಿ ಏನಾಯಿತು. ಬರೀ ಘೋಷಣೆಯಷ್ಟೇ ಸಿದ್ದರಾಮಯ್ಯ ಅವರ ಕೊಡುಗೆ, ಬರಿ ಡೋಂಗಿ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.