×
Ad

ಸಂಡೂರು ಕ್ಷೇತ್ರದಿಂದ ಸಂಸದ ಇ.ತುಕಾರಾಂ ಪತ್ನಿ ಕಾಂಗ್ರೆಸ್ ಅಭ್ಯರ್ಥಿ: ಸಿದ್ದರಾಮಯ್ಯ

Update: 2024-10-22 11:11 IST

ಮೈಸೂರು: ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಇ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಟಿ.ಕೆ.ಲೇಔಟ್ ನಲ್ಲಿರುವ ತನ್ನ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಂಡೂರು ಕ್ಷೇತ್ರದಿಂದ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣಾರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.

ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News