ಉದಯಗಿರಿ ಪ್ರಕರಣ: ಗಡಿಪಾರಿಗೆ ಸಂಬಂಧಿಸಿದಂತೆ ಕಾರಣ ಕೇಳಿ ಆರೋಪಿಗೆ ನೋಟಿಸ್
ಸಾಂದರ್ಭಿಕ ಚಿತ್ರ
ಮೈಸೂರು: ಇಸ್ಲಾಂ ಧರ್ಮ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹರಿಬಿಟ್ಟ ಪ್ರಕರಣದ ಸಂಬಂಧ ಆರೋಪಿ ಸತೀಶ್‌ಗೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ನ್ಯಾಯಾಲಯದ ಮೂಲಕ ಗಡೀಪಾರಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದಾರೆ.
'ನ್ಯಾಯಾಲಯವು ನಿಮಗೆ ಜಾಮೀನು ನೀಡಿರುವುದರಿಂದ ಜೀವಹಾನಿ ಹಾಗೂ ಆಸ್ತಿ ನಷ್ಟ ಉಂಟಾಗುವ ಸಂಭವ ಇರುವುದಾಗಿ ಗುಪ್ತ ಮಾಹಿತಿ ತಿಳಿದು ಬಂದಿರುತ್ತದೆ. ಇದೇ ವಿಚಾರ ಇಟ್ಟುಕೊಂಡು ಕಿಡಿಗೇಡಿಗಳು ಮತ್ತೆ ಗಲಭೆ ಉಂಟುಮಾಡುವ ಸಾಧ್ಯತೆ ಇರುವ ಕಾರಣ, ನಿಮ್ಮನ್ನು ನಿರ್ಧಿಷ್ಟ ಅವಧಿಗೆ ಗಡೀಪಾರು ಮಾಡುವಂತೆ ಉದಯಗಿರಿ ಪೊಲೀಸ್ ಇನ್ಸ್ ಪೆಕ್ಟರ್ ಸುಧಾಕರ್ ಮನವಿ ಮಾಡಿದ್ದಾರೆ' ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
'ನಿಮ್ಮನ್ನು ಗಡೀಪಾರು ಮಾಡಬಾರದೆಂಬುದಕ್ಕೆ ವಿವರಣೆಗಳಿದ್ದರೆ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿಏಕಪಕ್ಷೀಯವಾಗಿ ಮುಂದಿನ ಕ್ರಮ ಜರುಗಿಸುತ್ತೇವೆ' ಎಂದು ಡಿಸಿಪಿ ಅವರು ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗ ಅವರಿಗೆ ನೀಡಿರುವ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.