ಉದಯಗಿರಿ ಕಲ್ಲುತೂರಾಟ ಪ್ರಕರಣ | ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಲ್ಲಿ ವಕ್ತಿಯ ಬಂಧನ
Update: 2025-02-20 12:43 IST
ಉದಯಗಿರಿ ಕಲ್ಲುತೂರಾಟ ಪ್ರಕರಣ | ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಲ್ಲಿ ವಕ್ತಿಯ ಬಂಧನ
ಮೈಸೂರು: ಉದಯಗಿರಿ ಪೊಲೀಸರ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮೌಲ್ವಿ ಮುಫ್ತಿ ಮುಸ್ತಾಕ್ ಎಂಬವರನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಒಂದು ಧರ್ಮದ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು ಉದಯಗಿರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡುವ ವೇಳೆ ಉದ್ರಿಕ್ತಗೊಂಡ ಗುಂಪು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿತ್ತು.
ಈ ವೇಳೆ ಮೌಲ್ವಿ ಮುಫ್ತಿ ಮುಸ್ತಾಕ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸಿಸಿಬಿ ಪೊಲೀಸರು 16 ಜನರನ್ನು ಬಂಧಿಸಿದ್ದರು. ಇದೀಗ ಮೌಲ್ವಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ.