ಮೈಸೂರಿಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ
ಮೈಸೂರು : ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರವಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯದ ಡಿ.ಐ.ಜಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ಜೆ.ಎಸ್.ಎಸ್.ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 16ನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದಾರೆ.
ನಗರದ ಬನ್ನಿಮಂಟಪದ ಜೆ.ಎಸ್.ಎಸ್. ಮಡಿಕಲ್ ಕಾಲೇಜಿನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂಜನಗೂಡು-ಊಟಿ ರಸ್ರೆಯಲ್ಲಿರುವ ಚಾಮುಂಡಿ ಬೆಟ್ಟ ಪಾದದ ಬಳಿಯ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ನೇರವಾಗಿ ದೆಹಲಿಯತ್ತ ಪ್ರಯಾಣ ಬೆಳೆಸುವರು ಎಂದು ತಿಳಿದು ಬಂದಿದೆ.